/ CM

ಕೊಡಗು ಜಿಲ್ಲೆಗೆ ರಾಜ್ಯ ಸರ್ಕಾರದ ಕೊಡುಗೆಗಳು

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೊಡಗು ಜಿಲ್ಲೆಯು ಕ್ಷಿಪ್ರವಾಗಿ ಪ್ರಗತಿ ಸಾಧಿಸುತ್ತಿದ್ದು ಜಿಲ್ಲೆಗಾಗಿ ಈ ಕೆಳಕಾಣಿಸಿದಂತೆ ಅಭಿವೃದ್ಧಿ ಕೆಲಸವನ್ನು ಕೈಗೊಳ್ಳಲಾಗಿದೆ.

  1. ಹಾರಂಗಿ ಜಲಾಶಯ ಹಿನ್ನೀರಿನ ಪ್ರದೇಶದಲ್ಲಿ ಮನೆ ಮತ್ತು ಭೂಮಿ ಕಳೆದುಕೊಂಡ ಜನರ ಹಲವು ದಶಕಗಳ ಬೇಡಿಕೆಯಾದ ಸೋಮವಾರಪೇಟೆ ತಾಲ್ಲೂಕಿನ ಅತ್ತೂರು ಮತ್ತು ಯಡವನಾಡನ್ನು ಕಂದಾಯ ಗ್ರಾಮವನ್ನಾಗಿ ಪ್ರಕಟಿಸಿ ಅಲ್ಲಿನ ಜನರಿಗೆ ಆರ್‍ಟಿಸಿಯನ್ನೂ ವಿತರಣೆ ಮಾಡಲಾಗಿದೆ.
  2. ಅಕ್ರಮ-ಸಕ್ರಮ ಯೋಜನೆ 94 ಸಿ ಮತ್ತು 94 ಸಿಸಿ ರಡಿ ಸುಮಾರು 3 ಸಾವಿರ ಕುಟುಂಬಗಳಿಗೆ ಹಕ್ಕುಪತ್ರವನ್ನು ವಿತರಣೆ ಮಾಡಲಾಗಿದೆ. ಹಲವು ವರ್ಷಗಳ ಬೇಡಿಕೆಗಳಲ್ಲಿ ಒಂದಾದ ಈ ಕಾರ್ಯಕ್ರಮವನ್ನು ಈಡೇರಿಸಿರುವುದು ಪ್ರಸ್ತುತ ಸರ್ಕಾರದ ಮಹತ್ತರ ಸಾಧನೆಯಾಗಿದೆ.
  3. ಮಾನ್ಯ ಮುಖ್ಯಮಂತ್ರಿಯವರು 2013 ರ ನವೆಂಬರ್ ತಿಂಗಳಲ್ಲಿ ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ 13 ಕೋಟಿ ರೂ ವೆಚ್ಚದಲ್ಲಿ ನಿರ್ಮಿತವಾದ ಜಿಲ್ಲಾಡಳಿತ ಭವನವನ್ನು ಉದ್ಘಾಟಿಸಿದ್ದಾರೆ.
  4. ನಗರದ ಹೊರ ವಲಯದಲ್ಲಿ ಸುಮಾರು 150 ಕೋಟಿ ರೂ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಿದ್ದು, ಪ್ರಸ್ತುತ ಸರ್ಕಾರದಲ್ಲಿ ಕಾಲೇಜು ಶಿಕ್ಷಣ ಆರಂಭವಾಗಿದೆ. ಇಲ್ಲಿ ಪ್ರತಿ ವರ್ಷ 150 ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಪಡೆಯುತ್ತಿದ್ದಾರೆ.
  5. ನಗರದ ಹೊರ ವಲಯದ 5 ಎಕರೆ ಪ್ರದೇಶದಲ್ಲಿ ಸುಮಾರು 21 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಪಂಚಾಯತ್ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ ದೊರೆತಿದೆ.

Kodagu_GoK

  1. ನಗರೋತ್ಥಾನ ಯೋಜನೆಯಡಿ ಕೊಡಗು ಜಿಲ್ಲೆಯ ಒಂದು ನಗರಸಭೆ ಮತ್ತು ಮೂರು ಪಟ್ಟಣ ಪಂಚಾಯತ್‍ಗಳಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸುಮಾರು 131 ಕೋಟಿ ರೂ ಬಿಡುಗಡೆಯಾಗಿದ್ದು, ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಸುಮಾರು 4.50 ಕೋಟಿ ರೂ ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ ದೊರೆತಿದೆ.
  2. ಪ್ರಸ್ತುತ ಸರ್ಕಾರ ಜಿಲ್ಲಾ ಪಂಚಾಯತ್ ಹಾಗೂ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ ಕಳೆದ ನಾಲ್ಕು ಬಜೆಟ್‍ನಲ್ಲಿ ತಲಾ 50 ಕೋಟಿ ರೂ ಬಿಡುಗಡೆ ಮಾಡಿ ನೂರಾರು ಕಿ.ಮೀ ಡಾಂಬಾರು ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ.

Kodagu-INCK

  1. ಹಲವು ವರ್ಷಗಳ ಬೇಡಿಕೆಯಾದ ಜಿಲ್ಲೆಯ ನಿರಾಶ್ರಿತ ಸುಮಾರು 528 ಆದಿವಾಸಿ ಕುಟುಂಬಗಳಿಗೆ ಜಿಲ್ಲೆಯ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿವೇಶನ ಹಂಚಿಕೆ ಜೊತೆಗೆ ಮನೆ ನಿರ್ಮಾಣ ಪ್ರಗತಿ ಕಾರ್ಯ ನಡೆದಿದೆ. ಇದಕ್ಕಾಗಿ ಪ್ರಸ್ತುತ ಸರ್ಕಾರ ಸುಮಾರು 26.86 ಕೋಟಿ ರೂ ವೆಚ್ಚದಲ್ಲಿ ವಸತಿ ಹಾಗೂ ಮನೆ ನಿರ್ಮಾಣ ಕಾರ್ಯ ಕೈಗೊಂಡಿದೆ. ಈಗಾಗಲೇ ಶೇ 50 ರಷ್ಟು ಹಣ ಬಿಡುಗಡೆಯಾಗಿದೆ.
  2. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಸರ್ಕಾರ 3 ಕೋಟಿ ರೂ ಬಿಡುಗಡೆ ಮಾಡಿದ್ದು, ಜಿಲ್ಲಾಡಳಿತ ವತಿಯಿಂದ 80 ಸೆಂಟು ಜಾಗ ನಿಗದಿ ಮಾಡಲಾಗಿದೆ. ಸದ್ಯದಲ್ಲಿಯೇ ಕಾಮಗಾರಿಗೆ ಚಾಲನೆ ದೊರೆಯಲಿದೆ.

kodaku__rally_image

  1. ಆದಿವಾಸಿ ಗಿರಿಜನ ಭವನ ನಿರ್ಮಾಣಕ್ಕೆ 3.50 ಕೋಟಿ ರೂ ಬಿಡುಗಡೆಯಾಗಿದ್ದು, ಸದ್ಯದಲ್ಲಿಯೇ ಕಾಮಗಾರಿ ಆರಂಭವಾಗಲಿದೆ. ಹಾಗೆಯೇ ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಅಭಿವೃದ್ಧಿ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ನೂತನ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳು ಆರಂಭವಾಗಿದೆ.
  2. ರಾಜ್ಯ ಸರ್ಕಾರದ ಕೃಷಿ ಯಂತ್ರಧಾರೆ ಯೋಜನೆಯಡಿಯಲ್ಲಿ ಸಾವಿರಾರು ರೈತರಿಗೆ ಪ್ರಯೋಜವಾಗಿದ್ದು, ಕೃಷಿಯಲ್ಲಿ ಹೆಚ್ಚಿನ ತಂತ್ರಗಾರಿಕೆ ಅಳವಡಿಸಿಕೊಳ್ಳಲು ಸಾಧ್ಯವಾಗಿದೆ.
  3. ಅನ್ನಭಾಗ್ಯ ಯೋಜನೆಯಡಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಬಡ ಕುಟುಂಬಗಳು ಪ್ರಯೋಜವನ್ನು ಪಡೆದಿವೆ.

#NavaKarnatakaNirmana

WhatsApp-Image-2018-01-09-at-1.47.23-PM

WhatsApp-Image-2018-01-09-at-1.47.24-PM

WhatsApp-Image-2018-01-09-at-1.47.25-PM

WhatsApp-Image-2018-01-09-at-1.47.26-PM

WhatsApp-Image-2018-01-09-at-1.47.28-PM