/ CM

ಮೈಸೂರು ಜಿಲ್ಲೆಗೆ ರಾಜ್ಯ ಸರ್ಕಾರದ ಕೊಡುಗೆಗಳು

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮೈಸೂರು ಜಿಲ್ಲೆಯು ಕ್ಷಿಪ್ರವಾಗಿ ಪ್ರಗತಿ ಸಾಧಿಸುತ್ತಿದ್ದು ಜಿಲ್ಲೆಗಾಗಿ ಈ ಕೆಳಕಾಣಿಸಿದಂತೆ ಅಭಿವೃದ್ಧಿ ಕೆಲಸವನ್ನು ಕೈಗೊಳ್ಳಲಾಗಿದೆ.

 1. 115 ಕೋಟಿ ರೂ.ಗಳ ವೆಚ್ಚದಲ್ಲಿ 350 ಹಾಸಿಗೆಗಳ ಸಾಮಥ್ರ್ಯದಲ್ಲಿ ಮೈಸೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದ್ದು ಈ ಕಟ್ಟಡ ಕಾಮಗಾರಿ 2017ರ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳುವ ಗುರಿ ಇದೆ. 15 ಎಕೆರೆ ವಿಸ್ರ್ತೀಣದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗುತ್ತಿದೆ.
 2. ಮೈಸೂರು ನಗರದಲ್ಲಿ ಪಿ.ಕೆ.ಟಿ.ಬಿ. ಆಸ್ಪತ್ರೆ ಆವರಣದಲ್ಲಿ ಗಾಯಾಳುಗಳ ಚಿಕಿತ್ಸೆಗಾಗಿ 22 ಕೋಟಿ ರೂ.ಗಳ ವೆಚ್ಚದಲ್ಲಿ ಟ್ರಾಮಾಕೇರ್ ಕೇಂದ್ರ ನಿರ್ಮಾಣವಾಗುತ್ತಿದ್ದು 105 ಹಾಸಿಗೆಗಳ ಸಾಮಥ್ರ್ಯವುಳ್ಳ ಆಸ್ಪತ್ರೆ ಇದಾಗಿದ್ದು ವೈದ್ಯಕೀಯ ಕ್ಷೇತ್ರದ ಪ್ರಮುಖ ಸಾಧನೆಯಾಗಿದೆ.
 3. ವಿವಿಧ ಸರ್ಕಾರಿ ಇಲಾಖಾ ಕಚೇರಿಗಳನ್ನು ಒಂದೇ ಕಡೆ ನಿರ್ಮಿಸುವ ಕಾರಣಕ್ಕಾಗಿ ಜರ್ಮನ್ ಪ್ರೆಸ್ ಜಾಗದಲ್ಲಿ ಸುಮಾರು 59 ಕೋಟಿ ರೂ.ಗಳ ವೆಚ್ಚದಲ್ಲಿ ಜಿಲ್ಲಾ ಕಚೇರಿಗಳ ಸಂಕೀರ್ಣದ ನಿರ್ಮಾಣ ಕಾರ್ಯ ರೂಪುಗೊಳ್ಳುತ್ತಿದೆ.
 4. ನಗರದ ಬಸವೇಶ್ವರ ವೃತ್ತದಿಂದ ಹಾರ್ಡಿಂಗ್ ವೃತ್ತದವರೆಗಿನ ಬಿ.ಎನ್.ರಸ್ತೆ, ಹಾರ್ಡಿಂಗ್ ವೃತ್ತದಿಂದ ಕೆ.ಆರ್.ವೃತ್ತದ ವರೆಗಿನ ಆಲ್ಬರ್ಟ್ ವಿಕ್ಟರ್ ರಸ್ತೆ, ಕೆ.ಆರ್.ವೃತ್ತದಿಂದ ಅಬ್ದುಲ್ ಕಲಾಂ ವೃತ್ತದವರೆಗೆ ಸಯ್ಯಾಜಿ ರಾವ್ ರಸ್ತೆ ಮತ್ತು ಅಬ್ದುಲ್ ಕಲಾಂ ವೃತ್ತದಿಂದ ಮಿಲೇನಿಯಂ ವೃತ್ತದವರೆಗಿನ ನೆಲ್ಸನ್ ಮಂಡೇಲಾ ರಸ್ತೆಯನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗಿದೆ.

Mysuru_GoK-1

 1. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಆರಕ್ಷಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದ್ದು ವಿಶ್ರಾಂತಿ ಗೃಹ ನಿರ್ಮಾಣ, ಒಳಾಂಗಣ ಶೂಟಿಂಗ್ ರೇಂಜ್ ಮತ್ತು ನೂತನ ಪೊಲೀಸ್ ವಸತಿ ಗೃಹ ನಿರ್ಮಾಣ, ವಸತಿಗೃಹಗಳ ದುರಸ್ತಿ, ಮುಂತಾದ ಕಾಮಗಾರಿಗಳನ್ನು 56.28 ಕೋಟಿ ರೂ.ಗಳಲ್ಲಿ ಮಾಡಲಾಗಿದೆ.
 2. 78.95 ಕೋಟಿ ರೂ.ಗಳ ವೆಚ್ಚದಲ್ಲಿ ಮೈಸೂರು ನಗರದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣ, ಸರ್ಕಾರಿ ಅಭಿಯೋಜಕರ ಕಟ್ಟಡ ನಿರ್ಮಾಣ, ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ, ಸ್ವಾತಂತ್ರ್ಯ ವಕೀಲರ ಭವನ ಹಾಗೂ ನ್ಯಾಯಾಧೀಶರ ನ್ಯಾಯಾಂಗ ನೌಕರರ ವಸತಿ ಗೃಹವನ್ನು ನಿರ್ಮಿಸಲಾಗಿದೆ.
 3. ಮೈಸೂರಿನ ಪಡುವಾರಹಳ್ಳಿಯಲ್ಲಿ ಸರ್ಕಾರಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಸುಮಾರು 45 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿದೆ. 2,160 ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣವನ್ನು ಪಡೆದುಕೊಳ್ಳುತ್ತಿದ್ದಾರೆ.

Mysuru---INCK-2

 1. ಗ್ರಾಮೀಣ ಪ್ರದೇಶದಿಂದ ಬಂದು ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 33.60 ಕೋಟಿ ರೂ.ಗಳ ವೆಚ್ಚದಲ್ಲಿ ಮಹಿಳಾ ಹಾಸ್ಟೆಲ್‍ಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಪ್ರತಿ ವರ್ಷ 392 ವಿದ್ಯಾರ್ಥಿನಿಯರಿಗೆ ಅನುಕೂಲವಾಗುತ್ತಿದೆ.
 2. ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳ ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ 79.94 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.
 3. ಗ್ರಾಮೀಣ ಪ್ರದೇಶದಲ್ಲಿನ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಸಲುವಾಗಿ ಯೋಜನೆಯನ್ನು ರೂಪಿಸಲಾಗಿದ್ದು ಈವರೆಗೆ ಒಟ್ಟು 204 ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿದೆ.
 4. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಒಟ್ಟು 31 ಯೋಜನೆಗಳು ಜಾರಿಯಲ್ಲಿವೆ. ಈ ಪೈಕಿ 15 ಯೋಜನೆಗಳು ಪೂರ್ಣಗೊಂಡಿದ್ದು ಇದರಿಂದ 493 ಜನವಸತಿ ಪ್ರದೇಶಗಳಿಗೆ ನೀರನ್ನು ಒದಗಿಸಲಾಗುತ್ತಿದೆ.
 5. ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ 2013-14ನೇ ಸಾಲಿನಿಂದ 2,01,618 ಗಿಂತಲೂ ಹೆಚ್ಚಿನ ಕುಟುಂಬಗಳಿಗೆ ಉದ್ಯೋಗ ಚೀಟಿಯನ್ನು ವಿತರಿಸಲಾಗಿದ್ದು ಈ ಪೈಕಿ ಒಟ್ಟು ಕುಟುಂಬಗಳು 1,58,267 (4,43,710 ಕೂಲಿಕಾರರು) ಉದ್ಯೋಗವನ್ನು ಪಡೆದಿರುತ್ತಾರೆ.

mysore_rally_image

 1. ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಮಹದಾಸೆಯಿಂದ ಜಾರಿಗೆ ತಂದ ಅನ್ನಭಾಗ್ಯ ಯೋಜನೆಯಿಂದ 5,70,110 ಆದ್ಯತಾ ಕುಟುಂಬಗಳು ಸೇರಿ ಒಟ್ಟು 5,89,551 ಕುಟುಂಬಗಳ ಹಸಿವನ್ನು ನೀಗಿಸಲಾಗಿದೆ.
 2. 2013-14ನೇ ಸಾಲಿನಿಂದ ಜಿಲ್ಲೆಯಲ್ಲಿ ಒಟ್ಟು 1,25,558 ಶೌಚಾಲಯಗಳನ್ನು ನಿರ್ಮಿಸಲಾಗಿದೆ ಬಹಿರ್ದೆಸೆ ಮುಕ್ತ ಜಿಲ್ಲೆಯಾಗುವತ್ತ ಪ್ರಮುಖ ಹೆಜ್ಜೆಯನ್ನು ಇಟ್ಟಿದೆ.
 3. ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಪ್ರತೀ ವಿಧಾನ ಸಭಾ ಕ್ಷೇತ್ರದಿಂದ ಮೂಲ ಸೌಕರ್ಯಗಳ ಕೊರತೆಯುಳ್ಳ 5 ಗ್ರಾಮಗಳನ್ನು ಆಯ್ಕೆ ಮಾಡಿ ಪ್ರತಿ ಗ್ರಾಮಕ್ಕೆ 75 ಲಕ್ಷ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ.
 4. ಮೈಸೂರು ವಿಶ್ವವಿದ್ಯಾನಿಲಯ ಶತಮಾನೋತ್ಸವದ ಅಂಗವಾಗಿ ವಿಶ್ವವಿದ್ಯಾನಿಲಯಕ್ಕೆ 50 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದ್ದು
 5. 2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಗೆ ಒಟ್ಟು 10 ಹೊಸ ಪಶುವೈದ್ಯ ಸಂಸ್ಥೆಗಳನ್ನು ಮಂಜೂರು ಮಾಡಲಾಗಿದೆ. ಹಾಗೂ 5 ಪಶುವೈದ್ಯ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸಲಾಗಿದ್ದು 33 ಕೆರೆಗಳ ನಿರ್ಮಾಣಕ್ಕೆ ಯೋಜನೆಯನ್ನು ರೂಪಿಸಲಾಗಿದೆ.

#NavaKarnatakaNirmana

WhatsApp-Image-2018-01-11-at-12.59.08-PM

WhatsApp-Image-2018-01-11-at-12.59.11-PM

WhatsApp-Image-2018-01-11-at-12.59.12-PM

WhatsApp-Image-2018-01-11-at-12.59.17-PM

WhatsApp-Image-2018-01-11-at-12.59.18-PM

WhatsApp-Image-2018-01-11-at-12.59.19-PM--1-

ಈ ವೀಡಿಯೋ ವೀಕ್ಷಿಸಿ